ಗಾದನು ಕರ್ತನ ಹೆಸರಿನಲ್ಲಿ ಹೇಳಿದ ಮಾತಿನ ಪ್ರಕಾರ ದಾವೀದನು ಹೋದನು.
17ದಾವೀದನು ದೇವರಿಗೆ--ಜನರನ್ನು ಲೆಕ್ಕ ಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪವನ್ನು ಮಾಡಿ ಈ ಕೆಟ್ಟದ್ದನು ಮಾಡಿದ್ದೇನೆ. ಆದರೆ ಕುರಿಗಳಾದ ಇವರು ಮಾಡಿದ್ದೇನು? ನನ್ನ ದೇವರಾದ ಕರ್ತನೇ, ದಯದಿಂದ ನಿನ್ನ ಕೈ ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಆದರೆ ನಿನ್ನ ಜನರು ಬಾಧೆಪಡುವ ಹಾಗೆ ಅವರ ಮೇಲೆ ಬೇಡ ಅಂದನು.
18ಆಗ ಕರ್ತನ ದೂತನು ಗಾದನಿಗೆ--ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು ಅಂದನು.
19ಗಾದನು ಕರ್ತನ ಹೆಸರಿನಲ್ಲಿ ಹೇಳಿದ ಮಾತಿನ ಪ್ರಕಾರ ದಾವೀದನು ಹೋದನು.
20ಆದರೆ ಒರ್ನಾನನು ಗೋಧಿಯನ್ನು ತುಳಿಸುತ್ತಿರು ವಾಗ ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಕುಮಾರರೂ ಅಡಗಿಕೊಂಡಿದ್ದರು.
21ದಾವೀದನು ಒರ್ನಾನನ ಬಳಿಗೆ ಬಂದಾಗ ಅವನು ದೃಷ್ಟಿಸಿ ದಾವೀದ ನನ್ನು ಕಂಡು ಕಣದಿಂದ ಹೊರಟು ದಾವೀದನ ಮುಂದೆ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ