ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ.
8ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.
9ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
10ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ.
11ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
12ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ