ಯೋನ 2:3

ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು.

ಸಂದರ್ಭದೊಂದಿಗೆ ಓದಿ · ಯೋನ 2

1ಆಗ ಯೋನನು ವಿಾನಿನ ಹೊಟ್ಟೆಯೊಳಗಿಂದ ತನ್ನ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--

2ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ.

3ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು.

4ಆಗ ನಾನು ಹೇಳಿದ್ದು--ನಿನ್ನ ಕಣ್ಣುಗಳ ಎದುರಿನಿಂದ ಹೊರಗೆ ಹಾಕಲ್ಪಟ್ಟಿದ್ದೇನೆ; ಆದಾಗ್ಯೂ ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ತಿರುಗಿ ನೋಡುವೆನು.

5ನೀರು ಗಳು ಪ್ರಾಣದ ಮಟ್ಟಿಗೂ ನನ್ನನ್ನು ಸುತ್ತಿಕೊಂಡವು; ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು; ಆಪುಗಳು ನನ್ನ ತಲೆಯನ್ನು ಸುತ್ತಿಕೊಂಡಿದ್ದವು.

ಯೋನ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी