ಯೆರೆಮಿಯ 7:23

ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 7

21ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ.

22ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.

23ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.

24ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.

25ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು.

ಯೆರೆಮಿಯ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी