ಲೂಕನು 4:35

ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು.

ಸಂದರ್ಭದೊಂದಿಗೆ ಓದಿ · ಲೂಕನು 4

33ಆ ಸಭಾಮಂದಿರ ದಲ್ಲಿ ಅಶುದ್ಧ ದೆವ್ವ ಆತ್ಮವಿದ್ದ ಒಬ್ಬ ಮನುಷ್ಯನಿದ್ದನು. ಅವನು ಗಟ್ಟಿಯಾಗಿ ಕೂಗುತ್ತಾ--

34ನಮ್ಮನ್ನು ಬಿಟ್ಟು ಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೆ ಯಾಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನು ಎಂದು ಹೇಳಿದನು.

35ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು.

36ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.

37ಆತನ ಕೀರ್ತಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು.

ಲೂಕನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी