ಮತ್ತಾಯನು 18:7

ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!

ಸಂದರ್ಭದೊಂದಿಗೆ ಓದಿ · ಮತ್ತಾಯನು 18

5ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ.

6ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.

7ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!

8ಆದದರಿಂದ ನಿನ್ನ ಕೈಯಾಗಲೀ ಕಾಲಾಗಲೀ ನಿನ್ನನ್ನು ಅಭ್ಯಂತರಪಡಿಸಿದರೆ ಅವುಗಳನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕೈಯುಳ್ಳವನಾಗಿ ಇಲ್ಲವೆ ಎರಡು ಕಾಲುಳ್ಳವನಾಗಿ ನಿತ್ಯವಾದ ಬೆಂಕಿಗೆ ಹಾಕಲ್ಪಡುವದಕ್ಕಿಂತ ಕುಂಟ ನಾಗಿ ಇಲ್ಲವೆ ಊನನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.

9ನಿನ್ನ ಕಣ್ಣು ನಿನ್ನನ್ನು ಅಭ್ಯಂತರ ಪಡಿಸಿದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕಣ್ಣುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.

ಮತ್ತಾಯನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी