ಮತ್ತಾಯನು 23:16

ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.

ಸಂದರ್ಭದೊಂದಿಗೆ ಓದಿ · ಮತ್ತಾಯನು 23

14ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.

15ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.

16ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.

17ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?

18ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ.

ಮತ್ತಾಯನು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी