೧ ಅರಸುಗಳು 14:21

ಆದರೆ ಸೊಲೊಮೋನನ ಮಗನಾದ ರೆಹಬ್ಬಾ ಮನು ಯೆಹೂದದಲ್ಲಿ ಆಳುತ್ತಾ ಇದ್ದನು. ರೆಹಬ್ಬಾ ಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷ ದವನಾಗಿದ್ದು ಕರ್ತನು ತನ್ನ ನಾಮವನ್ನು ಇಡಲು ಇಸ್ರಾಯೇಲಿನ ಸಕಲ ಗೋತ್ರಗಳೊಳಗಿಂದ ಆದು ಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾಗಿದ್ದಳು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 14

19ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.

20ಯಾರೊಬ್ಬಾಮನು ಆಳಿದ ದಿವಸಗಳು ಇಪ್ಪತ್ತೆರಡು ವರುಷಗಳಾಗಿದ್ದವು. ಅವನು ತನ್ನ ಪಿತೃಗಳ ಸಂಗಡ ಮಲಗಿದನು. ಅವನ ಮಗನಾದ ನಾದಾಬನು ಅವನಿಗೆ ಬದಲಾಗಿ ಆಳಿದನು.

21ಆದರೆ ಸೊಲೊಮೋನನ ಮಗನಾದ ರೆಹಬ್ಬಾ ಮನು ಯೆಹೂದದಲ್ಲಿ ಆಳುತ್ತಾ ಇದ್ದನು. ರೆಹಬ್ಬಾ ಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷ ದವನಾಗಿದ್ದು ಕರ್ತನು ತನ್ನ ನಾಮವನ್ನು ಇಡಲು ಇಸ್ರಾಯೇಲಿನ ಸಕಲ ಗೋತ್ರಗಳೊಳಗಿಂದ ಆದು ಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾಗಿದ್ದಳು.

22ಆದರೆ ಯೆಹೂದದವರು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತಮ್ಮ ಪಿತೃಗಳು ಮಾಡಿದ ಸಮಸ್ತ ಪಾಪಗಳಿ ಗಿಂತ ತಾವು ಹೆಚ್ಚಾಗಿ ಪಾಪಮಾಡಿ ಆತನಿಗೆ ರೋಷ ವನ್ನೆಬ್ಬಿಸಿದರು.

23ಅವರು ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ ಹಸುರಾದ ಪ್ರತಿ ಗಿಡದ ಕೆಳಗೂ ತೋಪು ಗಳನ್ನು ವಿಗ್ರಹಗಳನ್ನು ಉನ್ನತ ಸ್ಥಳಗಳನ್ನು ತಮಗಾಗಿ ಮಾಡಿಕೊಂಡರು. ಇದಲ್ಲದೆ ದೇಶದಲ್ಲಿ ಪುರುಷ ಸಂಗಮರಿದ್ದರು.

೧ ಅರಸುಗಳು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी