ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಇದ್ದು ತಿನ್ನುತ್ತಾ ಕುಡಿಯುತ್ತಾ ಇದ್ದರು.ಅವರ ಸಹೋದರರು ಅವರಿಗೋಸ್ಕರ ಸಿದ್ಧಮಾಡಿ ದರು.
37ಯೊರ್ದನಿನ ಆಚೆಯಲ್ಲಿರುವ ರೂಬೇನ್ಯರಲ್ಲಿಯೂ ಗಾದನವರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದ ಲ್ಲಿಯೂ ಯುದ್ಧಕ್ಕೆ ತಕ್ಕಂಥ ಸಕಲ ಆಯುಧಗಳನ್ನು ಧರಿಸಿಕೊಂಡವರು ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿಯು.
38ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲ್ಯರ ಮೇಲೆ ಅರಸನಾಗ ಮಾಡಲು ಪೂರ್ಣಹೃದಯದಿಂದ ಹೆಬ್ರೋನಿಗೆ ಬಂದರು. ಇದಲ್ಲದೆ ಇಸ್ರಾಯೇಲಿ ನಲ್ಲಿದ್ದ ಮಿಕ್ಕಾದವರೆಲ್ಲರೂ ದಾವೀದನನ್ನು ಅರಸ ನಾಗ ಮಾಡಲು ಒಂದೇ ಹೃದಯವುಳ್ಳವರಾಗಿದ್ದರು.
39ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಇದ್ದು ತಿನ್ನುತ್ತಾ ಕುಡಿಯುತ್ತಾ ಇದ್ದರು.ಅವರ ಸಹೋದರರು ಅವರಿಗೋಸ್ಕರ ಸಿದ್ಧಮಾಡಿ ದರು.
40ಇದಲ್ಲದೆ ಅವರ ಬಳಿಯಲ್ಲಿದ್ದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿಯರು ಮೊದಲುಗೊಂಡು ಎಲ್ಲರೂ ಕತ್ತೆ ಒಂಟೆ ಹೇಸರಕತ್ತೆ ಎತ್ತುಗಳ ಮೇಲೆ ರೊಟ್ಟಿಗಳನ್ನೂ ಆಹಾರವನ್ನೂ ಹಿಟ್ಟನ್ನೂ ಅಂಜೂರದ ಉಂಡೆಗಳನ್ನೂ ಒಣಗಿದ ದ್ರಾಕ್ಷೇ ಗೊನೆಗಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಎತ್ತುಗಳನ್ನೂ ಕುರಿ ಗಳನ್ನೂ ಬಹಳವಾಗಿ ತಂದರು; ಯಾಕಂದರೆ ಇಸ್ರಾ ಯೇಲಿನಲ್ಲಿ ಸಂತೋಷವಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ