ಅವನು ಯಾವಾಗ ನನಗೆ ಇಂಥ ಮಾತುಗಳನ್ನು ಹೇಳಿದನೋ ಆಗ ನಾನು ನನ್ನ ಮುಖ ವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು.
13ಆದರೆ ಪಾರಸಿಯ ರಾಜ್ಯದ ಪ್ರಭುವು ಇಪ್ಪತ್ತೊಂದು ದಿವಸಗಳು ನನಗೆ ಎದುರು ನಿಂತನು; ಆದರೆ ಇಗೋ,ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ವಿಾಕಾಯೇಲನು ನನ್ನ ಸಹಾ ಯಕ್ಕೆ ಬಂದನು; ನಾನು ಆ ಪಾರಸೀಯ ಅರಸರ ಬಳಿಯಲ್ಲಿ ಉಳಿದುಕೊಂಡು
14ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
15ಅವನು ಯಾವಾಗ ನನಗೆ ಇಂಥ ಮಾತುಗಳನ್ನು ಹೇಳಿದನೋ ಆಗ ನಾನು ನನ್ನ ಮುಖ ವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು.
16ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ಆ ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ.
17ಈ ನಿನ್ನ ಒಡೆಯನ ಸೇವಕನು ನನ್ನ ಒಡೆಯನ ಸಂಗಡ ಹೇಗೆ ಮಾತನಾಡುವನು? ನನ್ನ ವಿಷಯ ವಾದರೋ ಆಗಿನಿಂದಲೂ ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ; ಉಸಿರು ಸಹ ನನ್ನಲ್ಲಿ ಉಳಿಯಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ