೨ ಅರಸುಗಳು 2:13

ಅವನು ಎಲೀಯನಿಂದ ಬಿದ್ದ ಹೊದಿಕೆಯನ್ನು ಎತ್ತಿಕೊಂಡು ಹಿಂದಕ್ಕೆಹೋಗಿ ಯೊರ್ದನಿನ ತೀರದಲ್ಲಿ ನಿಂತನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 2

11ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.

12ಎಲೀ ಷನು ಅದನ್ನು ನೋಡಿ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೇ, ಅದರ ಕುದುರೆ ರಾಹುತರಾಗಿದ್ದವನೇ ಎಂದು ಕೂಗಿದನು. ಮತ್ತೆ ಅವ ನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡಾಗಿ ಹರಿದನು.

13ಅವನು ಎಲೀಯನಿಂದ ಬಿದ್ದ ಹೊದಿಕೆಯನ್ನು ಎತ್ತಿಕೊಂಡು ಹಿಂದಕ್ಕೆಹೋಗಿ ಯೊರ್ದನಿನ ತೀರದಲ್ಲಿ ನಿಂತನು.

14ಎಲೀಯನಿಂದ ಬಿದ್ದ ಹೊದಿಕೆಯನ್ನು ತಕ್ಕೊಂಡು ನೀರನ್ನು ಹೊಡೆದು--ಎಲೀಯನ ದೇವರಾದ ಕರ್ತನು ಎಲ್ಲಿದ್ದಾನೆ ಅಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ ಅದು ಎರಡು ಭಾಗವಾದದ್ದರಿಂದ ಎಲೀ ಷನು ದಾಟಿಹೋದನು.

15ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.

೨ ಅರಸುಗಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी