ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
1ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ.
2ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
3ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ