ಅವಳ ಪಾಪಗಳು ಆಕಾಶದ ವರೆಗೂ ಮುಟ್ಟಿವೆ. ದೇವರು ಅವಳ ದ್ರೋಹಗಳನ್ನು ಜ್ಞಾಪಿಸಿಕೊಂಡಿದ್ದಾನೆ.
3ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
4ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
5ಅವಳ ಪಾಪಗಳು ಆಕಾಶದ ವರೆಗೂ ಮುಟ್ಟಿವೆ. ದೇವರು ಅವಳ ದ್ರೋಹಗಳನ್ನು ಜ್ಞಾಪಿಸಿಕೊಂಡಿದ್ದಾನೆ.
6ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.
7ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ