ವಿಮೋಚನಕಾಂಡ 20:19

ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 20

17ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.

18ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು.

19ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.

20ಆಗ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ, ನಿಮ್ಮನ್ನು ಪರೀಕ್ಷಿಸುವದಕ್ಕೂ ನೀವು ಪಾಪ ಮಾಡದಂತೆ ಆತನ ಭಯವು ನಿಮಗಿರುವದಕ್ಕೂ ದೇವರು ಬಂದಿದ್ದಾನೆ ಅಂದನು.

21ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.

ವಿಮೋಚನಕಾಂಡ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी