ಯೆಹೆಜ್ಕೇಲನು 14:19

ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ,

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 14

17ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ

18ಈ ಮೂವರು ಅದರೊಳ ಗಿದ್ದರೂ ಅವರು ಕುಮಾರರನ್ನಾದರೂ ಕುಮಾರ್ತೆ ಯರನ್ನಾದರೂ ತಪ್ಪಿಸದೆ, ನನ್ನ ಜೀವದಾಣೆ ತಾವು ಮಾತ್ರ ತಪ್ಪಿಸಿಕೊಳ್ಳುವರು ಎಂದು ದೇವರಾದ ಕರ್ತನು ಹೇಳುವನು;

19ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ,

20ನೋಹ ದಾನಿ ಯೇಲ ಯೋಬ ಎಂಬವರು ಅದರಲ್ಲಿದ್ದಾಗ್ಯೂ ಅವರು ಮಗನನ್ನಾದರೂ ಮಗಳನ್ನಾದರೂ ತಪ್ಪಿಸದೆ ನನ್ನ ಜೀವ ದಾಣೆ, ತಮ್ಮ ಪ್ರಾಣಗಳನ್ನು ಮಾತ್ರ ನೀತಿಯಿಂದ ತಪ್ಪಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.

21ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?

ಯೆಹೆಜ್ಕೇಲನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी