ಹೊಳೆಗಳ ಹಾಗೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು?
5ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ.
6ವೇಗಶಾಲಿಗಳು ಓಡಿಹೋಗದಿರಲಿ; ಪರಾಕ್ರಮಶಾಲಿಗಳು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿ ಬೀಳುವರು.
7ಹೊಳೆಗಳ ಹಾಗೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು?
8ಐಗುಪ್ತವು ಪ್ರಳಯದ ಹಾಗೆ ಏರುತ್ತದೆ; ಅದರ ನೀರುಗಳು ಹೊಳೆಗಳ ಹಾಗೆ ಕದಲುತ್ತವೆ; ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ, ಪಟ್ಟಣವನ್ನೂ ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ ಎಂದು ಆತನು ಹೇಳುತ್ತಾನೆ.
9ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ