ಯೆಶಾಯ 38:3

ಓ ಕರ್ತನೇ, ನಾನು ನಿನ್ನ ಮುಂದೆ ಸತ್ಯವಾಗಿಯೂ ಯಥಾರ್ಥ ಹೃದಯದಿಂದಲೂ ನಡೆದು ನಿನ್ನ ದೃಷ್ಟಿ ಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಪು ಮಾಡಿಕೋ ಎಂದು ಬೇಡಿಕೊಂಡು ವ್ಯಥೆಪಟ್ಟು ಅತ್ತನು.

ಸಂದರ್ಭದೊಂದಿಗೆ ಓದಿ · ಯೆಶಾಯ 38

1ಆ ಕಾಲದಲ್ಲಿ ಹಿಜ್ಕೀಯನು ರೋಗಿಯಾಗಿ ಸಾಯುವದಕ್ಕಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಹೇಳಿದನು.

2ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ--

3ಓ ಕರ್ತನೇ, ನಾನು ನಿನ್ನ ಮುಂದೆ ಸತ್ಯವಾಗಿಯೂ ಯಥಾರ್ಥ ಹೃದಯದಿಂದಲೂ ನಡೆದು ನಿನ್ನ ದೃಷ್ಟಿ ಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಪು ಮಾಡಿಕೋ ಎಂದು ಬೇಡಿಕೊಂಡು ವ್ಯಥೆಪಟ್ಟು ಅತ್ತನು.

4ಆಗ ಕರ್ತನ ವಾಕ್ಯವು ಯೆಶಾ ಯನ ಬಳಿಗೆ ಬಂದು ಹೇಳಿದ್ದೇನಂದರೆ--

5ನೀನು ಹೋಗಿ ಹಿಜ್ಕೀ ಯನಿಗೆ ಹೇಳತಕ್ಕದ್ದೇನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನೂ ಕೂಡಿಸುತ್ತೇನೆ.

ಯೆಶಾಯ 38 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी