ನೆಹೆಮಿಯ 2:4

ಅದಕ್ಕೆ ಅರಸನು ನನಗೆ--ನೀನು ಕೇಳುವದೇನು ಅಂದನು.

ಸಂದರ್ಭದೊಂದಿಗೆ ಓದಿ · ನೆಹೆಮಿಯ 2

2ಆದಕಾರಣ ಅರಸನು ನನಗೆ--ನಿನಗೆ ಕಾಯಿಲೆ ಇಲ್ಲದೆ ನಿನ್ನ ಮುಖವು ದುಃಖವಾಗಿರುವದೇನು? ನಿನಗೆ ರೋಗವಿಲ್ಲವಲ್ಲಾ? ಇದು ಮನೋ ದುಃಖವಲ್ಲದೆ ಮತ್ತೊಂದಲ್ಲ ಅಂದನು.

3ಆಗ ನಾನು ಬಹು ಭಯಪಟ್ಟು ಅರಸನಿಗೆ--ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿ ಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುವಾಗ ನನ್ನ ಮುಖವು ದುಃಖವಿಲ್ಲದೆ ಇರುವದು ಹೇಗೆ ಅಂದೆನು.

4ಅದಕ್ಕೆ ಅರಸನು ನನಗೆ--ನೀನು ಕೇಳುವದೇನು ಅಂದನು.

5ಆಗ ನಾನು ಪರಲೋಕದ ದೇವರಿಗೆ ಪ್ರಾರ್ಥನೆಮಾಡಿ ಅರಸನಿಗೆ--ಅರಸನು ಮೆಚ್ಚಿದರೆ ಮತ್ತು ನಿನ್ನ ಸೇವಕನಿಗೆ ನಿನ್ನ ಮುಂದೆ ದಯೆ ದೊರಕಿದರೆ ನೀನು ನನ್ನನ್ನು ನನ್ನ ತಂದೆಗಳ ಸಮಾಧಿಗಳಿರುವ ಪಟ್ಟಣವನ್ನು ಕಟ್ಟಿಸುವದಕ್ಕಾಗಿ ಯೆಹೂದಕ್ಕೆ ನನ್ನನ್ನು ಕಳುಹಿಸಬೇಕು ಅಂದೆನು.

6ರಾಣಿಯು ತನ್ನ ಬಳಿಯಲ್ಲಿ ಕುಳಿತಿರುವಾಗ ಅರಸನು ನನಗೆ--ನಿನ್ನ ಪ್ರಯಾಣ ಎಷ್ಟು ದಿವಸ? ನೀನು ತಿರಿಗಿ ಯಾವಾಗ ಬರುತ್ತೀ ಅಂದನು. ಆಗ ಅರಸನು ನನ್ನನ್ನು ಕಳುಹಿಸಲು ಸಮ್ಮತಿ ಪಟ್ಟನು; ನಾನು ಅವನಿಗೆ ಸಮಯ ಗೊತ್ತು ಮಾಡಿ ದೆನು.

ನೆಹೆಮಿಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी