ಯೆರೆಮಿಯ 48:3

ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶನವು, ಹೊರಡುವದು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 48

1ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್‌ ನಾಚಿಕೆಹೊಂದಿ ಹೆದರಿಕೊಂಡಿತು.

2ಮೋವಾಬಿನ ಕೀರ್ತಿ ಇನ್ನು ಮೇಲೆ ಇರುವದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ಜನಾಂಗವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ, ಮದ್ಮೆನೇ, ನೀನು ಸಹ ಕಡಿಯಲ್ಪಡುವಿ; ಕತ್ತಿಯು ನಿನ್ನನ್ನು ಹಿಂದಟ್ಟುವದು.

3ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶನವು, ಹೊರಡುವದು.

4ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು.

5ಲೂಹೀತ್‌ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶನದ ಶಬ್ದವನ್ನು ಕೇಳಿದ್ದಾರೆ.

ಯೆರೆಮಿಯ 48 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी