ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು.
43ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ.
44ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ.
45ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು.
46ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ