ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ.
3ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
4ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು.
5ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ.
6ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.
7ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ