ಧರ್ಮೋಪದೇಶಕಾಂಡ 8:8

ಗೋಧಿಯೂ ಜವೆಗೋಧಿಯೂ ದ್ರಾಕ್ಷೆಯೂ ಅಂಜೂರ ಮರಗಳೂ ದಾಳಿಂಬರಗಳೂ ಇರುವ ದೇಶವೇ; ಅದು ಹಿಪ್ಪೇ ಎಣ್ಣೆಯೂ ಜೇನೂ ಉಳ್ಳದೇಶವೇ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 8

6ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಂಡು ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನಿಗೆ ಭಯಪಡಬೇಕು.

7ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ.

8ಗೋಧಿಯೂ ಜವೆಗೋಧಿಯೂ ದ್ರಾಕ್ಷೆಯೂ ಅಂಜೂರ ಮರಗಳೂ ದಾಳಿಂಬರಗಳೂ ಇರುವ ದೇಶವೇ; ಅದು ಹಿಪ್ಪೇ ಎಣ್ಣೆಯೂ ಜೇನೂ ಉಳ್ಳದೇಶವೇ.

9ನೀನು ಕೊರತೆಯಿಲ್ಲದೆ ರೊಟ್ಟಿ ತಿನ್ನುವ ಆ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು; ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ.

10ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.

ಧರ್ಮೋಪದೇಶಕಾಂಡ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी