ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು?
6ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು.
7ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.
8ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು?
9ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
10ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ