ಪ್ರಕಟನೆ 12:12

ಆದದರಿಂದ ಪರಲೋಕಗಳೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂಮಿಯ ಮೇಲೆ ಮತ್ತು ಸಮುದ್ರದಲ್ಲಿ ಇರುವವರಿಗೆ ಅಯ್ಯೊ! ಯಾಕಂದರೆ ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ ಎಂಬದಾಗಿ ಹೇಳಿತು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 12

10ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.

11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.

12ಆದದರಿಂದ ಪರಲೋಕಗಳೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂಮಿಯ ಮೇಲೆ ಮತ್ತು ಸಮುದ್ರದಲ್ಲಿ ಇರುವವರಿಗೆ ಅಯ್ಯೊ! ಯಾಕಂದರೆ ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ ಎಂಬದಾಗಿ ಹೇಳಿತು.

13ಘಟಸರ್ಪವು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವದನ್ನು ಕಂಡು ಗಂಡುಮಗುವನ್ನು ಹೆತ್ತಸ್ತ್ರೀ ಯನ್ನು ಹಿಂಸಿಸಿತು.

14ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು; ಅಲ್ಲಿ ಒಂದು ಕಾಲ, ಕಾಲಗಳು, ಅರ್ಧ ಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.

ಪ್ರಕಟನೆ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी