ಮತ್ತಾಯನು 5:12

ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.

ಸಂದರ್ಭದೊಂದಿಗೆ ಓದಿ · ಮತ್ತಾಯನು 5

10ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.

11ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.

12ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.

13ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.

14ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು.

ಮತ್ತಾಯನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी