ಲೂಕನು 3:18

ಅವನು ಇನ್ನೂ ಅನೇಕ ವಿಷಯಗಳಿಂದ ಎಚ್ಚರಿಸಿ ಜನರಿಗೆ ಸಾರಿದನು.

ಸಂದರ್ಭದೊಂದಿಗೆ ಓದಿ · ಲೂಕನು 3

16ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು

17ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು.

18ಅವನು ಇನ್ನೂ ಅನೇಕ ವಿಷಯಗಳಿಂದ ಎಚ್ಚರಿಸಿ ಜನರಿಗೆ ಸಾರಿದನು.

19ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ

20ಅವನು ಯೋಹಾ ನನನ್ನು ಸೆರೆಯಲ್ಲಿ ಹಾಕಿ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ಮೇಲೆ ಇದನ್ನು ಕೂಡಿಸಿದನು.

ಲೂಕನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी