ರೋಮಾಪುರದವರಿಗೆ 8:3

ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 8

1ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.

2ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.

3ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.

4ಹೀಗೆ ಶರೀರಕ್ಕನುಸಾರ ವಾಗಿ ನಡೆಯದೆ ಆತ್ಮನಿಗನುಸಾರವಾಗಿ ನಡೆಯುವವ ರಾದ ನಮ್ಮಲ್ಲಿ ನ್ಯಾಯಪ್ರಮಾಣದ ನೀತಿಯು ನೆರ ವೇರುವದು.

5ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.

ರೋಮಾಪುರದವರಿಗೆ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी