ಯಾಕೋಬನು 1:25

ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.

ಸಂದರ್ಭದೊಂದಿಗೆ ಓದಿ · ಯಾಕೋಬನು 1

23ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು.

24ಇವನು ತನ್ನನ್ನು ನೋಡಿ ಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು.

25ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.

26ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.

27ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.

ಯಾಕೋಬನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी