ಮಿಕ 7:16

ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು.

ಸಂದರ್ಭದೊಂದಿಗೆ ಓದಿ · ಮಿಕ 7

14ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.

15ನೀನು ಐಗುಪ್ತ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ ಅವನಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು.

16ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು.

17ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.

18ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.

ಮಿಕ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी