ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
33ಅವನು ಬಂದ ಮಾರ್ಗವಾಗಿಯೇ ತಿರಿಗಿ ಹೋಗುವನು; ಆದರೆ ಅವನು ಈ ಪಟ್ಟಣದಲ್ಲಿ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ.
34ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ.
35ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
36ಅಶ್ಶೂರಿನ ಅರಸನಾದ ಸನ್ಹೇರೀಬನು ಹಿಂತಿರುಗಿಹೋಗಿ ನಿನೆವೆಯಲ್ಲಿ ವಾಸ ವಾಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ