ಎಜ್ರನು 5:15

ಈ ಪಾತ್ರೆಗಳನ್ನು ತೆಗೆದುಕೊಂಡು ಯೆರೂ ಸಲೇಮಿನಲ್ಲಿರುವ ಆಲಯಕ್ಕೆ ತಕ್ಕೊಂಡು ಹೋಗು; ದೇವರ ಆಲಯವು ಅದರ ಸ್ಥಳದಲ್ಲಿ ಕಟ್ಟಿಸಲ್ಪಡಲಿ ಅಂದನು.

ಸಂದರ್ಭದೊಂದಿಗೆ ಓದಿ · ಎಜ್ರನು 5

13ಆದರೆ ಬಾಬೆಲಿನ ಅರಸ ನಾದ ಕೋರೆಷನು ಮೊದಲನೇ ವರುಷದಲ್ಲಿ ಅರಸ ನಾದ ಕೋರೆಷನು ದೇವರ ಈ ಆಲಯವನ್ನು ಕಟ್ಟಲು ಆಜ್ಞೆಯನ್ನು ಕೊಟ್ಟನು.

14ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತಕ್ಕೊಂಡು ಬಾಬೆಲಿನ ಮಂದಿರಕ್ಕೆ ತಂದ ದೇವರ ಆಲಯದ ಬೆಳ್ಳಿಬಂಗಾರದ ಸಾಮಾನುಗಳನ್ನು ಅರಸನಾದ ಕೋರೆ ಷನು ಬಾಬೆಲಿನ ಮಂದಿರದಿಂದ ತಕ್ಕೊಂಡು ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿ ಅವ ನಿಗೆ--

15ಈ ಪಾತ್ರೆಗಳನ್ನು ತೆಗೆದುಕೊಂಡು ಯೆರೂ ಸಲೇಮಿನಲ್ಲಿರುವ ಆಲಯಕ್ಕೆ ತಕ್ಕೊಂಡು ಹೋಗು; ದೇವರ ಆಲಯವು ಅದರ ಸ್ಥಳದಲ್ಲಿ ಕಟ್ಟಿಸಲ್ಪಡಲಿ ಅಂದನು.

16ಅಗ ಶೆಷ್ಬಚ್ಚರನು ಬಂದು ಯೆರೂಸಲೇಮಿ ನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿಸಿ ದನು. ಆ ದಿವಸದಿಂದ ಇದು ವರೆಗೂ ಅದು ಕಟ್ಟಲ್ಪ ಡುತ್ತದೆ; ಇನ್ನೂ ಮುಗಿಯಲಿಲ್ಲ ಅಂದರು.

17ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ.

ಎಜ್ರನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी