ಓ ಅರಸನೇ, ಇದರ ಅರ್ಥವು ಏನಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ.
22ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು.
23ಆಗ ಪಾಲಕನು ಮತ್ತು ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದು ಬಂದು--ಮರವನ್ನು ಕಡಿದು ನಾಶಮಾಡಿರಿ; ಆದರೆ ಅದರ ಬೇರಿನ ಮೋಟನ್ನು ಕಬ್ಬಿಣ ಮತ್ತು ಕಂಚುಗಳ ಕಟ್ಟುಳ್ಳದ್ದಾಗಿ ಭೂಮಿಯಲ್ಲಿಯೂ ಬಯಲಿನ ಎಳೇ ಹುಲ್ಲಿನಲ್ಲಿಯೂ ಬಿಡಿರಿ. ಅದು ಆಕಾಶದ ಮಂಜಿನಿಂದ ತೇವವಾಗಲಿ; ಏಳು ಕಾಲಗಳು ಕಳೆಯುವ ತನಕ ಅದರ ಪಾಲು ಕಾಡು ಮೃಗಗಳ ಸಹವಾಸದ ಗತಿಯಂತೆ ಬರಲಿ ಎಂದು ಸಾರುವದನ್ನು ಅರಸನಾದ ನೀನು ನೋಡಿದೆಯಲ್ಲಾ.
24ಓ ಅರಸನೇ, ಇದರ ಅರ್ಥವು ಏನಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ.
25ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.
26ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂದು ಅವರು ಆಜ್ಞೆ ಮಾಡಿದ್ದರಲ್ಲಿ ಅಂದರೆ ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ