ಯೆಹೆಜ್ಕೇಲನು 32:20

ಅವರು ಕತ್ತಿಯಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಅವಳು ಕತ್ತಿಗೆ ಒಪ್ಪಿಸಲ್ಪಟ್ಟಿದ್ದಾಳೆ; ಅವಳನ್ನೂ ಅವಳ ಎಲ್ಲಾ ಸಮೂಹವನ್ನೂ ಎಳೆಯಿರಿ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 32

18ಮನುಷ್ಯಪುತ್ರನೇ, ಐಗುಪ್ತದ ಜನಸಮೂಹದ ವಿಷಯವಾಗಿ ಗೋಳಾಡು. ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಕುಮಾರ್ತೆ ಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಯೊ ಳಗೆ ಇಳಿಯುವವರ ಜೊತೆ ತಳ್ಳಿಬಿಡು.

19ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವಿ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು.

20ಅವರು ಕತ್ತಿಯಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಅವಳು ಕತ್ತಿಗೆ ಒಪ್ಪಿಸಲ್ಪಟ್ಟಿದ್ದಾಳೆ; ಅವಳನ್ನೂ ಅವಳ ಎಲ್ಲಾ ಸಮೂಹವನ್ನೂ ಎಳೆಯಿರಿ.

21ಶೂರರಲ್ಲಿ ಬಲಿಷ್ಠರೂ ಅವನಿಗೆ ಸಹಾಯ ಮಾಡಿದವರ ಸಂಗಡ ಪಾತಾಳದೊಳಗಿಂದ ಅವನ ಸಂಗಡ ಮಾತನಾಡುವರು; ಅವರು ಇಳಿದುಹೋಗಿ ಸುನ್ನತಿ ಯಿಲ್ಲದವರಾಗಿಯೂ ಕತ್ತಿಯಿಂದ ಹತರಾದವರಾ ಗಿಯೂ ಮಲಗಿದ್ದಾರೆ.

22ಅಲ್ಲಿ ಅಶ್ಶೂರ್ಯ ಮತ್ತು ಅದರ ಎಲ್ಲಾ ಗುಂಪು ಇರುವದು; ಸುತ್ತಲೂ ಅದರ ಸಮಾಧಿಗಳಿರುವವು; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ.

ಯೆಹೆಜ್ಕೇಲನು 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी