ಅಪೊಸ್ತಲರ ಕೃತ್ಯಗಳು 17:30

ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 17

28ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.

29ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.

30ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.

31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.

32ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.

ಅಪೊಸ್ತಲರ ಕೃತ್ಯಗಳು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी