ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಸಮ್ಮತಿ ಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರ ಳನ್ನು ಕೊಟ್ಟನು.
19ಅದಕ್ಕೆ ಅವರು--ಐಗುಪ್ತ್ಯನಾದ ಒಬ್ಬ ಮನುಷ್ಯನು ಕುರುಬರ ಕೈಗೆ ನಮ್ಮನ್ನು ತಪ್ಪಿಸಿ ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ ಮಂದೆಗೆ ಕುಡಿಸಿದನು ಅಂದರು.
20ಆಗ ಅವನು ತನ್ನ ಕುಮಾರ್ತೆಯರಿಗೆ--ಅವನು ಎಲ್ಲಿದ್ದಾನೆ? ಆ ಮನುಷ್ಯ ನನ್ನು ಯಾಕೆ ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟ ಮಾಡಲಿ ಅಂದನು.
21ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಸಮ್ಮತಿ ಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರ ಳನ್ನು ಕೊಟ್ಟನು.
22ಆಕೆಯು ಮಗನನ್ನು ಹೆತ್ತಾಗ ಮೋಶೆಯು ಅವನಿಗೆ ಗೇರ್ಷೋಮ್ ಎಂದು ಹೆಸರಿ ಟ್ಟನು. ಯಾಕಂದರೆ ಅವನು--ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ ಅಂದನು.
23ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ