೧ ಸಮುವೇಲನು 20:14

ಕರ್ತನು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ. ಆದರೆ ನಾನು ಇನ್ನೂ ಬದುಕು ತ್ತಿರುವಾಗ ನಾನು ಸಾಯದ ಹಾಗೆ ನೀನು ಕರ್ತನ ದಯೆಯನ್ನು ನನ್ನ ಮೇಲೆ ತೋರಿಸಬೇಕಾದದ್ದಲ್ಲದೆ

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 20

12ಯೋನಾತಾನನು ದಾವೀದನಿಗೆ--ಇಸ್ರಾಯೇ ಲ್ಯರ ದೇವರಾದ ಕರ್ತನೇ, ನಾನು ನಾಳೆನಾಡಿದ್ದರೊ ಳಗೆ ನನ್ನ ತಂದೆಯನ್ನು ವಿಚಾರಿಸಲು ಇಗೋ, ದಾವೀದನ ಮೇಲೆ ದಯವಾದರೆ ನಿನಗೆ ತಿಳಿಸುವ ಹಾಗೆ ಹೇಳಿ ಕಳುಹಿಸದೆ ಇದ್ದರೆ ಕರ್ತನು ಯೋನಾತಾನನಿಗೆ ಅದಕ್ಕಿಂತ ಅಧಿಕವಾಗಿ ಮಾಡಲಿ.

13ಆದರೆ ನಿನಗೆ ಕೇಡುಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ ಅದನ್ನು ನಿನಗೆ ತಿಳಿಸಿ ನೀನು ಸಮಾಧಾನ ದಿಂದ ಹೋಗುವ ಹಾಗೆ ನಿನ್ನನ್ನು ಕಳುಹಿಸುವೆನು.

14ಕರ್ತನು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ. ಆದರೆ ನಾನು ಇನ್ನೂ ಬದುಕು ತ್ತಿರುವಾಗ ನಾನು ಸಾಯದ ಹಾಗೆ ನೀನು ಕರ್ತನ ದಯೆಯನ್ನು ನನ್ನ ಮೇಲೆ ತೋರಿಸಬೇಕಾದದ್ದಲ್ಲದೆ

15ಕರ್ತನು ದಾವೀದನ ಶತ್ರುಗಳಲ್ಲಿ ಒಬ್ಬನೂ ಇಲ್ಲದ ಹಾಗೆ ಭೂಮಿಯಿಂದ ತೆಗೆದುಬಿಟ್ಟಾಗ ಎಂದಿಗೂ ನಿನ್ನ ಕೃಪೆಯನ್ನು ನನ್ನ ಮನೆಯಿಂದ ತೆಗೆದುಹಾಕಬಾರದು ಅಂದನು.

16ಹೀಗೆಯೇ ಯೋನಾತಾನನು ದಾವೀದನ ಮನೆಯ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ದಾವೀದನ ಶತ್ರುಗಳಿಂದ ಕರ್ತನು ಅವಶ್ಯವಾಗಿ ಕೇಳಲಿ ಅಂದನು.

೧ ಸಮುವೇಲನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी