ನೆಹೆಮಿಯ 13:27

ನೀವು ಅನ್ಯ ಸ್ತ್ರೀಯರನ್ನು ಮದುವೆಮಾಡಿಕೊಳ್ಳುವದರಿಂದ ನಮ್ಮ ದೇವರಿಗೆ ಅಪರಾಧ ಮಾಡಿ ಈ ಸಮಸ್ತವಾದ ದೊಡ್ಡ ಕೇಡು ಮಾಡುವ ಹಾಗೆ ನಾವು ನಿಮ್ಮ ಮಾತು ಕೇಳ ಬಹುದೋ ಅಂದೆನು.

ಸಂದರ್ಭದೊಂದಿಗೆ ಓದಿ · ನೆಹೆಮಿಯ 13

25ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು;

26ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು.

27ನೀವು ಅನ್ಯ ಸ್ತ್ರೀಯರನ್ನು ಮದುವೆಮಾಡಿಕೊಳ್ಳುವದರಿಂದ ನಮ್ಮ ದೇವರಿಗೆ ಅಪರಾಧ ಮಾಡಿ ಈ ಸಮಸ್ತವಾದ ದೊಡ್ಡ ಕೇಡು ಮಾಡುವ ಹಾಗೆ ನಾವು ನಿಮ್ಮ ಮಾತು ಕೇಳ ಬಹುದೋ ಅಂದೆನು.

28ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.

29ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕ ಸೇವೆಯ ಒಡಂಬ ಡಿಕೆಯನ್ನೂ ಲೇವಿಯರ ಒಡಂಬಡಿಕೆಯನ್ನೂ ಅಶುದ್ಧ ಮಾಡಿದ್ದರಿಂದ ಅವರನ್ನು ನೆನಸು.

ನೆಹೆಮಿಯ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी