೨ ತಿಮೊಥೆಯನಿಗೆ 2:12

ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.

ಸಂದರ್ಭದೊಂದಿಗೆ ಓದಿ · ೨ ತಿಮೊಥೆಯನಿಗೆ 2

10ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.

11ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು.

12ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.

13ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.

14ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.

೨ ತಿಮೊಥೆಯನಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी