ಯೆಹೋಶುವ 5:2

ಆ ಕಾಲದಲ್ಲಿ ಕರ್ತನು ಯೆಹೋಶುವ ನಿಗೆ--ನೀನು ಹರಿತವಾದ ಚೂರಿಗಳನ್ನು ಮಾಡಿ ಕೊಂಡು ತಿರಿಗಿ ಎರಡನೇ ಸಾರಿ ಇಸ್ರಾಯೇಲ್‌ ಮಕ್ಕಳಿಗೆ ಸುನ್ನತಿಮಾಡು ಅಂದನು.

ಸಂದರ್ಭದೊಂದಿಗೆ ಓದಿ · ಯೆಹೋಶುವ 5

1ಇದಾದ ಮೇಲೆ ಇಸ್ರಾಯೇಲ್‌ ಮಕ್ಕಳು ದಾಟಿಹೋಗುವ ಪರಿಯಂತರ ಕರ್ತನು ಅವರ ಮುಂದೆ ಯೊರ್ದನನ್ನು ಒಣಗಿಹೋಗ ಮಾಡಿ ದ್ದನ್ನು ಆಚೇ ದಡದ ಪಶ್ಚಿಮದಲ್ಲಿ ವಾಸಿಸಿದ್ದ ಅಮೋರಿ ಯರ ಸಕಲ ಅರಸುಗಳೂ ಸಮುದ್ರದ ಆಚೆಯಲ್ಲಿ ವಾಸಿಸಿದ ಕಾನಾನ್ಯರ ಸಕಲ ಅರಸುಗಳೂ ಕೇಳಿದಾಗ ಅವರ ಹೃದಯವು ಕರಗಿಹೋಯಿತು. ಇಸ್ರಾಯೇಲ್‌ ಮಕ್ಕಳ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.

2ಆ ಕಾಲದಲ್ಲಿ ಕರ್ತನು ಯೆಹೋಶುವ ನಿಗೆ--ನೀನು ಹರಿತವಾದ ಚೂರಿಗಳನ್ನು ಮಾಡಿ ಕೊಂಡು ತಿರಿಗಿ ಎರಡನೇ ಸಾರಿ ಇಸ್ರಾಯೇಲ್‌ ಮಕ್ಕಳಿಗೆ ಸುನ್ನತಿಮಾಡು ಅಂದನು.

3ಆಗ ಯೆಹೋಶುವನು ತಾನು ಹರಿತವಾದ ಚೂರಿಗಳನ್ನು ಮಾಡಿಕೊಂಡು ಇಸ್ರಾಯೇಲ್‌ ಮಕ್ಕಳಿಗೆ ಸುನ್ನತಿ ಗುಡ್ಡದಲ್ಲಿ ಸುನ್ನತಿ ಮಾಡಿದನು.

4ಯೆಹೋಶುವನು ಸುನ್ನತಿಮಾಡಿದ ಕಾರಣವೇನಂದರೆ--ಐಗುಪ್ತದಿಂದ ಹೊರಟ ಸಕಲ ಜನರು ಗಂಡಸರಾದ ಯುದ್ಧದ ಮನುಷ್ಯರೆಲ್ಲರು ಐಗುಪ್ತದಿಂದ ಹೊರಟಾಗ ಅರಣ್ಯದೊಳಗೆ ಮಾರ್ಗ ದಲ್ಲಿ ಸತ್ತು ಹೋದರು.

ಯೆಹೋಶುವ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी