ಯಾಜಕತ್ವವು ಬೇರೆಯಾದರೆ ನ್ಯಾಯಪ್ರಮಾಣವು ಕೂಡ ಬೇರೆ ಯಾಗುವದು ಅಗತ್ಯ.
10ಹೇಗೆಂದರೆ ಮೆಲ್ಕಿಜೆದೇಕನು ಲೇವಿಯ ಮೂಲ ಪುರಷನನ್ನು ಎದುರುಗೊಂಡಾಗ ಇವನಲ್ಲಿ ಲೇವಿಯು ಅಡಕ ವಾಗಿದ್ದನು.
11ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).
12ಯಾಜಕತ್ವವು ಬೇರೆಯಾದರೆ ನ್ಯಾಯಪ್ರಮಾಣವು ಕೂಡ ಬೇರೆ ಯಾಗುವದು ಅಗತ್ಯ.
13ಇವು ಯಾವಾತನ ವಿಷಯ ದಲ್ಲಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸಂಬಂಧಪಟ್ಟವನು; ಆ ಗೋತ್ರದವರಲ್ಲಿ ಒಬ್ಬನೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ.
14ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ