ಯೆಹೋಶುವ 24:27

ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಯೆಹೋಶುವ 24

25ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆ ಯನ್ನು ಮಾಡಿ ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು.

26ಈ ಮಾತುಗಳನ್ನು ಯೆಹೋಶುವನು ದೇವರ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ಎತ್ತಿ ಅದನ್ನು ಅಲ್ಲಿ ಕರ್ತನ ಪರಿಶುದ್ಧ ಸ್ಥಳದ ಬಳಿಯಲ್ಲಿ ಏಲಾಮರದ ಕೆಳಗೆ ನೆಟ್ಟನು.

27ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.

28ಹೀಗೆ ಯೆಹೋಶುವನು ಜನರನ್ನು ಅವರವರ ಬಾಧ್ಯೆತೆಗಳಿಗೆ ಕಳುಹಿಸಿದನು.

29ಇವುಗಳಾದ ತರುವಾಯ ನೂನನ ಮಗನಾದ ಯೆಹೋಶುವನೆಂಬ ಕರ್ತನ ಸೇವಕನು ನೂರ ಹತ್ತು ವರುಷ ವಯಸ್ಸಿನವನಾಗಿ ಸತ್ತನು.

ಯೆಹೋಶುವ 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी