ಆಗ ಕರ್ತನು ನನಗೆ ಈ ಜನರಿಗೋಸ್ಕರ ಒಳ್ಳೇದಕ್ಕಾಗಿ ಪ್ರಾರ್ಥನೆ ಮಾಡಬೇಡ;
9ನೀನು ಯಾಕೆ ಗಾಬರಿಪಡುವ ಮನುಷ್ಯನ ಹಾಗೆಯೂ ರಕ್ಷಿಸಲಾರದ ಪರಾಕ್ರಮಶಾಲಿಯ ಹಾಗೆಯೂ ಇರಬೇಕು? ಆದರೂ ನೀನು, ಓ ಕರ್ತನೇ, ನಮ್ಮ ಮಧ್ಯದಲ್ಲಿ ಇದ್ದೀ, ನಿನ್ನ ಹೆಸರಿನಿಂದ ನಾವು ಕರೆಯಲ್ಪಟ್ಟಿದ್ದೇವೆ; ನಮ್ಮನ್ನು ಕೈ ಬಿಡಬೇಡ.
10ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ , ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು.
11ಆಗ ಕರ್ತನು ನನಗೆ ಈ ಜನರಿಗೋಸ್ಕರ ಒಳ್ಳೇದಕ್ಕಾಗಿ ಪ್ರಾರ್ಥನೆ ಮಾಡಬೇಡ;
12ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.
13ಆಗ ನಾನು--ಹಾ, ದೇವರಾದ ಕರ್ತನೇ, ಇಗೋ, ಪ್ರವಾದಿಗಳು ಅವರಿಗೆ--ನೀವು ಕತ್ತಿಯನ್ನು ನೋಡುವದಿಲ್ಲ, ನಿಮಗೆ ಕ್ಷಾಮವು ಬಾರದು, ಆದರೆ ಕರ್ತನು ನಿಮಗೆ ಈ ಸ್ಥಳದಲ್ಲಿ ಸ್ಥಿರ ಸಮಾಧಾನ ಕೊಡುತ್ತಾನೆಂದು ಹೇಳುತ್ತಾರೆ ಅಂದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ