ಧರ್ಮೋಪದೇಶಕಾಂಡ 16:16

ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 16

14ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.

15ನಿನ್ನ ದೇವರಾದ ಕರ್ತನಿಗೆ ಏಳು ದಿವಸ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು; ನಿನ್ನ ದೇವರಾದ ಕರ್ತನು ನಿನ್ನನ್ನು ಎಲ್ಲಾ ಆದಾಯದಲ್ಲಿಯೂ ಎಲ್ಲಾ ಕೈಕೆಲಸದಲ್ಲಿಯೂ ಆಶೀರ್ವದಿಸುವದರಿಂದ ನೀನು ನಿಜವಾಗಿಯೂ ಸಂತೋಷದಿಂದ ಇರಬೇಕು.

16ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.

17ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನು ತನ್ನ ಕೈಯಿಂದ ಆಗುವಷ್ಟು ಕೊಡಬೇಕು.

18ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.

ಧರ್ಮೋಪದೇಶಕಾಂಡ 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी