ಲೂಕನು 11:35

ಆದದರಿಂದ ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ;

ಸಂದರ್ಭದೊಂದಿಗೆ ಓದಿ · ಲೂಕನು 11

33ಯಾರೂ ದೀಪವನ್ನು ಹಚ್ಚಿ ಗುಪ್ತ ಸ್ಥಳದಲ್ಲಾಗಲಿ ಇಲ್ಲವೆ ಕೊಳಗದೊಳಗಾಗಲಿ ಇಡುವದಿಲ್ಲ; ಆದರೆ ಒಳಗೆ ಬರುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡು ತ್ತಾರಷ್ಟೆ.

34ಕಣ್ಣು ಶರೀರದ ಬೆಳಕಾಗಿದೆ; ಆದದರಿಂದ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲವು ತುಂಬಾ ಬೆಳಕಾಗಿರುತ್ತದೆ; ಅದು ಕೆಟ್ಟದ್ದಾಗಿದ್ದರೆ ನಿನ್ನ ಶರೀರವು ಸಹ ಕತ್ತಲೆಯಿಂದ ತುಂಬಿರುವದು.

35ಆದದರಿಂದ ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ;

36ಆದಕಾರಣ ಯಾವ ಭಾಗದಲ್ಲಿಯೂ ಕತ್ತಲೆಯಾಗಿ ರದೆ ನಿನ್ನ ಶರೀರವೆಲ್ಲವೂ ಪೂರ್ಣವಾಗಿ ಬೆಳಕಾಗಿರುವ ದಾದರೆ ಪ್ರಕಾಶಮಾನವಾದ ದೀಪವು ನಿನಗೆ ಬೆಳಕು ಕೊಡುವ ಪ್ರಕಾರ ಸಮಸ್ತವೂ ಬೆಳಕಾಗಿರುವದು ಎಂದು ಹೇಳಿದನು.

37ಆತನು ಮಾತನಾಡುತ್ತಿದ್ದಾಗ ಒಬ್ಬಾನೊಬ್ಬ ಫರಿಸಾಯನು ತನ್ನೊಂದಿಗೆ ಊಟಮಾಡಬೇಕೆಂದು ಆತನನ್ನು ಬೇಡಿಕೊಂಡನು. ಆಗ ಆತನು ಒಳಗೆ ಹೋಗಿ ಊಟಕ್ಕೆ ಕೂತುಕೊಂಡನು.

ಲೂಕನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी