ಪ್ರಕಟನೆ 17:16

ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 17

14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.

15ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.

16ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.

17ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.

18ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.

ಪ್ರಕಟನೆ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी