ಅರಣ್ಯಕಾಂಡ 8:11

ಕರ್ತನ ಸೇವೆಯನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್‌ ಮಕ್ಕಳ ಸಮರ್ಪಣೆಗಾಗಿ ಲೇವಿಯರನ್ನು ಸಮರ್ಪಿಸಬೇಕು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 8

9ಆಗ ನೀನು ಲೇವಿಯರನ್ನು ಸಭೆಯ ಗುಡಾರದ ಮುಂದೆ ಕರತಂದು ಇಸ್ರಾಯೇಲ್ಯರ ಸಮಸ್ತ ಸಭೆಯನ್ನು ಒಟ್ಟುಗೂಡಿಸಬೇಕು.

10ನೀನು ಲೇವಿ ಯರನ್ನು ಕರ್ತನ ಎದುರಿನಲ್ಲಿ ಕರತರಬೇಕು. ಆಗ ಇಸ್ರಾಯೇಲ್‌ ಮಕ್ಕಳು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.

11ಕರ್ತನ ಸೇವೆಯನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್‌ ಮಕ್ಕಳ ಸಮರ್ಪಣೆಗಾಗಿ ಲೇವಿಯರನ್ನು ಸಮರ್ಪಿಸಬೇಕು.

12ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನಿಗೆ ಒಂದನ್ನು ಪಾಪದ ಬಲಿಗಾಗಿಯೂ ಮತ್ತೊಂದನ್ನು ದಹನ ಬಲಿಗಾಗಿಯೂ ಸಮರ್ಪಿಸಬೇಕು.

13ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ನಿಲ್ಲಿಸಿ ಅವರನ್ನು ಕರ್ತನಿಗೆ ಕಾಣಿಕೆಯಂತೆ ಸಮರ್ಪಿಸಬೇಕು.

ಅರಣ್ಯಕಾಂಡ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी