ಯೋಹಾನನು 15:19

ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.

ಸಂದರ್ಭದೊಂದಿಗೆ ಓದಿ · ಯೋಹಾನನು 15

17ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ.

18ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.

19ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.

20ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.

21ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.

ಯೋಹಾನನು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी