ಯೆಹೆಜ್ಕೇಲನು 38:21

ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 38

19ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್‌ ದೇಶದಲ್ಲಿ ಮಹಾಕಂಪನ ಉಂಟಾಗು ವದು;

20ಆಗ ಸಮುದ್ರದ ವಿಾನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವವು; ಪರ್ವತಗಳು ಕೆಡವಲ್ಪಡುವವು, ಇಳಿ ಜಾರುಗಳು ಬೀಳುವವು, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವವು.

21ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು.

22ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.

23ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.

ಯೆಹೆಜ್ಕೇಲನು 38 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी