ಯೆರೆಮಿಯ 2:26

ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 2

24ಅರಣ್ಯದ ಅಭ್ಯಾಸ ವುಳ್ಳ ಕಾಡುಕತ್ತೆಯೇ; ಅವಳ ಅತ್ಯಾಶೆಯಲ್ಲಿ ಗಾಳಿ ಯನ್ನು ಹೀರಿಕೊಳ್ಳುತ್ತಾಳೆ; ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವ ರೆಲ್ಲರೂ ಆಯಾಸಪಡುವದಿಲ್ಲ; ಅವಳ ತಿಂಗಳಲ್ಲಿ ಅವಳನ್ನು ಕಾಣುವರು.

25ನಿನ್ನ ಕಾಲು ಬರೀ ಕಾಲಾ ಗದ ಹಾಗೆಯೂ ನಿನ್ನ ಗಂಟಲು ನೀರಡಿಕೆ ಪಡದ ಹಾಗೆಯೂ ಹಿಂತೆಗೆ; ಆದರೆ ನೀನು--ಇಲ್ಲ, ನಿರೀಕ್ಷೆ ಯಿಲ್ಲ, ಯಾಕಂದರೆ ನಾನು ಅನ್ಯರನ್ನು ಪ್ರೀತಿ ಮಾಡಿದ್ದೇನೆ. ಅವರ ಹಿಂದೆ ನಾನು ಹೋಗುತ್ತೇನೆ ಎಂದು ನೀನು ಹೇಳಿದಿ.

26ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.

27ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.

28ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.

ಯೆರೆಮಿಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी