೨ ಪೂರ್ವಕಾಲವೃತ್ತಾಂತ 34:14

ಆದರೆ ಕರ್ತನ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತಕ್ಕೊಂಡು ಬರುವಾಗ ಯಾಜಕ ನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಕರ್ತನ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 34

12ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿ ದರು. ಅವರ ವಿಚಾರಣೆಯ ಕರ್ತರು ಯಾರಂದರೆ: ಮೆರಾರಿಯ ಕುಮಾರರಲ್ಲಿ ಲೇವಿಯರಾದ ಯಹತನೂ ಒಬದ್ಯನೂ; ಕೆಹಾತ್ಯರ ಮಕ್ಕಳಲ್ಲಿ ಜೆಕರೀಯನೂ ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವ ರಾದ ಲೇವಿಯರೆಲ್ಲರೂ ಅದನ್ನು ನಡಿಸುತ್ತಾ ಇದ್ದರು.

13ಇದಲ್ಲದೆ ಹೊರೆಗಾರರ ಮೇಲೆಯೂ ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ವಿಚಾರಕರಾಗಿದ್ದರು. ಲೇವಿಯವರಲ್ಲಿ ಕೆಲವರು ರಾಯಸದವರೂ ಯಜಮಾನರೂ ದ್ವಾರಪಾಲಕರೂ ಆಗಿದ್ದರು.

14ಆದರೆ ಕರ್ತನ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತಕ್ಕೊಂಡು ಬರುವಾಗ ಯಾಜಕ ನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಕರ್ತನ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡನು.

15ಆಗ ಹಿಲ್ಕೀಯನು ಪ್ರತ್ಯುತ್ತರ ಕೊಟ್ಟು ರಾಯಸದ ವನಾದ ಶಾಫಾನನಿಗೆ--ಕರ್ತನ ಆಲಯದಲ್ಲಿ ನ್ಯಾಯ ಪ್ರಮಾಣದ ಪುಸ್ತಕವು ನನಗೆ ಸಿಕ್ಕಿತು ಎಂದು ಹೇಳಿ ದನು. ಮತ್ತು ಹಿಲ್ಕೀಯನು ಆ ಪುಸ್ತಕವನ್ನು ಶಾಫಾನ ನಿಗೆ ಒಪ್ಪಿಸಿದನು.

16ಶಾಫಾನನು ಆ ಪುಸ್ತಕವನ್ನು ಅರಸನ ಬಳಿಗೆ ತಕ್ಕೊಂಡು ಹೋಗಿ ಅರಸನಿಗೆ ಈ ಮಾತನ್ನು ತಿರಿಗಿ ಹೇಳಿದನು. ಏನಂದರೆ, ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಾರೆ.

೨ ಪೂರ್ವಕಾಲವೃತ್ತಾಂತ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी